ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಟೆಂಪೋ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ!

ಪೆರಂಪಳ್ಳಿ: ಉಡುಪಿಯ ಪೆರಂಪಳ್ಳಿ ಎಂಬಲ್ಲಿ ವೇಗವಾಗಿ ಚಲಿಸುತ್ತಿದ್ದ ಟೆಂಪೋವೊಂದು ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಪೆರಂಪಳ್ಳಿ-ಮಣಿಪಾಲ ಮುಖ್ಯ ರಸ್ತೆಯಲ್ಲಿ ಇಂದು ಈ ದುರ್ಘಟನೆ ಸಂಭವಿಸಿದೆ. ಸ್ಕೂಟರ್‌ನಲ್ಲಿ ರಸ್ತೆ ದಾಟುತಿದ್ದ ಮಹಿಳೆಗೆ ಹಾಲಿನ ಟೆಂಪೋ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಮಹಿಳೆ ರಸ್ತೆಯಲ್ಲೇ ಬಿದ್ದಿದ್ದಾರೆ. ಆದರೆ ಯಾವುದೇ ತೀವ್ರತರದ ಗಾಯಗಳಿಲ್ಲದೇ ಪಾರಾಗಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಬಸ್ ಸಿಬ್ಬಂದಿ ಮತ್ತು ಸಾರ್ವಜನಿಕರು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

Edited By : Manjunath H D
PublicNext

PublicNext

08/03/2022 06:44 pm

Cinque Terre

39.91 K

Cinque Terre

0

ಸಂಬಂಧಿತ ಸುದ್ದಿ