ಮುಲ್ಕಿ: ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕಿನ್ನಿಗೋಳಿ ಸೊಸೈಟಿಯ ಜನರೇಟರ್ ನಲ್ಲಿ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಸೊಸೈಟಿಯ ಸಿಬ್ಬಂದಿಗಳು ಕಾರ್ಯ ಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ.
ಜನರೇಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಡೆದು ಏಕಾಏಕಿ ಬೆಂಕಿ ಧಗಧಗನೆ ಉರಿಯಲಾರಂಭಿಸಿದೆ.
ಈ ಸಂದರ್ಭ ಸೊಸೈಟಿ ಪರಿಸರದಲ್ಲಿ ದಟ್ಟ ಹೊಗೆ ಉಂಟಾಗಿದ್ದು ಹೆದ್ದಾರಿ ಬದಿ ಸಂಚರಿಸುತ್ತಿರುವ ವಾಹನ ಸವಾರರು ಭಯ ಭೀತರಾಗಿದ್ದಾರೆ.ಬಳಿಕ ಬೆಂಕಿಯನ್ನು ನಂದಿಸಲಾಗಿದೆ.
ಕಿನ್ನಿಗೋಳಿ ರಾಜ್ಯ ಹೆದ್ದಾರಿಗೆ ತಾಗಿಕೊಂಡೇ ಇರುವ ಈ ಸೊಸೈಟಿ ಹಾಗೂ ಪಕ್ಕದ ಎರಡು ಅಂಗಡಿಗಳು ತೀರಾ ಅಪಾಯಕಾರಿ ಸ್ಥಿತಿಯಲ್ಲಿದ್ದು ಪಡಿತರ ಸಾಮಗ್ರಿಗಳನ್ನು ಪಡೆಯುವ ಗ್ರಾಹಕರು ಹೆದ್ದಾರಿ ಬದಿಯಲ್ಲಿ ನಿಂತುಕೊಳ್ಳುತ್ತಿದ್ದು ಭಾರಿ ಅಪಾಯ ಸಂಭವಿಸುವ ದಲ್ಲಿ ತೆರವುಗೊಳಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
Kshetra Samachara
15/03/2022 04:29 pm