ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇವು ಹರಸಿ‌ ನಾಡಿಗೆ ಬಂದ ಕಾಡುಕೋಣಗಳಿಗೆ ರೈಲು ಡಿಕ್ಕಿ

ಪುತ್ತೂರು: ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿಗೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ ಮರಳಿ ಕಾಡು ಸೇರಲು ರೈಲ್ವೆ ಹಳಿಯಲ್ಲಿ ಹೋಗುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದೆ.

ಘಟನಾ ಸ್ಥಳಕ್ಕೆ ಎಸಿಎಫ್ ಕಾರ್ಯಪ್ಪ, ಪುತ್ತೂರು ವಲಯಾರಣ್ಯಾಧಿಕಾರಿ ಕಿರಣ್, ನರಿಮೊಗರು ಉಪ ವಲಯಾರಣ್ಯಾಧಿಕಾರಿ ಕುಮಾರಸ್ವಾಮಿ, aಪುತ್ತೂರು ಉಪ ವಲಯಾರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕರಾದ ಸತ್ಯನ್ ಡಿ.ಜಿ ಹಾಗೂ ದೀಪಕ್ ಭೇಟಿ ನೀಡಿ ಸಾವನ್ನಪ್ಪಿದ ಕಾಡುಕೋಣಗಳ ಮರಣೋತ್ತರ ಮಹಜರು ನಡೆಸಿದ್ದಾರೆ.

Edited By :
Kshetra Samachara

Kshetra Samachara

17/03/2022 05:28 pm

Cinque Terre

6.07 K

Cinque Terre

0