ಬೆಳ್ತಂಗಡಿ: ಕುಂದಾಪುರದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಸರಕಾರಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ್ದು ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಬಳಿ ನಡೆದಿರುವ ಅಪಘಾತವಾಗಿದ್ದು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಓರ್ವ ಸಾವನ್ನಪ್ಪಿದ ಮತ್ತೊಬ್ಬ ಮಂಗಳೂರು ಆಸ್ಪತ್ರೆಗೆ ಸಾಗಿಸಲು ಮುಂದಾದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದವರನ್ನ ಸಾಧಿಕ್(32) ಸಿರಾಜ್ (32) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲಾಗಿದೆ.
Kshetra Samachara
18/03/2022 11:00 pm