ಕಾಪು: ಉಡುಪಿ ಜಿಲ್ಲೆಯ ಮಲ್ಲಾರ್ ನ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮೂರಕ್ಕೇರಿದೆ. ಗಂಭೀರ ಗಾಯಗೊಂಡಿದ್ದ ನಿಯಾಜ್ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.
ಇಂದು ಬೆಳಿಗ್ಗೆ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡಿದ್ದರು.ಇದೀಗ ತೀವ್ರ ಗಾಯಗೊಂಡಿದ್ದ ನಿಯಾಜ್ ಮೃತರಾಗಿದ್ದಾರೆ. ಅಗ್ನಿಶಾಮಕದಳದ ಸತತ ಕಾರ್ಯಾಚರಣೆಯಿಂದ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮಲ್ಲಾರು ಪಕೀರನಕಟ್ಟೆ ಮಸೀದಿ ಬಳಿ ಈ ದುರಂತ ನಡೆದಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಮೂರು ಮಂದಿಗೆ ಗಾಯಗಳಾಗಿವೆ. ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿದರು.
PublicNext
21/03/2022 03:29 pm