ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಶುಕ್ರವಾರ 4.30 ಸುಮಾರಿಗೆ ನಡೆದಿದೆ.
ಮೃತ ಯುವಕನನ್ನು ಮುಲ್ಕಿ ಸಮೀಪದ ಚಿತ್ರಾಪು ಉಮಾ ನಿವಾಸ ಬಳಿಯ ನಿವಾಸಿ ಗಣೇಶ ಆರ್ ದೇವಾಡಿಗ(25) ಎಂದು ಗುರುತಿಸಲಾಗಿದೆ.
ಮೃತ ಯುವಕ ಗಣೇಶ್ ಸುರತ್ಕಲ್ ಸಮೀಪದ ಎನ್ಐಟಿಕೆ ಯ ವಾಚ್ ಮ್ಯಾನ್ ಕೆಲಸ ಮಾಡುತ್ತಿದ್ದು ಬೆಳಿಗ್ಗೆ 4.30 ಗಂಟೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಸಂದರ್ಭ ಕೂಡಲೇ ಕಾರ್ಯಪ್ರವೃತ್ತರಾದ ಹಳೆಯಂಗಡಿಯ ರಿಕ್ಷಾ ಚಾಲಕ ಯೋಗೀಶ ಮತ್ತು ಪೂಜಾ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಗಣೇಶ್ ಮೃತಪಟ್ಟಿದ್ದಾರೆ.
ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತೀವ್ರ ಬಡತನ ಕುಟುಂಬದಲ್ಲಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ರಮೇಶ್ ದೇವಾಡಿಗ ರವರ ಇಬ್ಬರು ಪುತ್ರರಲ್ಲಿ ಹಿರಿಯ ಪುತ್ರ ಗಣೇಶ್ ದೇವಾಡಿಗ ಆಕಸ್ಮಿಕ ನಿಧನದಿಂದ ಮನೆಯಲ್ಲಿ ಶೋಕ ಮಡುಗಟ್ಟಿದ್ದು ರೋದನ ಮುಗಿಲು ಮುಟ್ಟಿದೆ.
Kshetra Samachara
25/03/2022 10:24 am