ಮಂಗಳೂರು: ನಗರದ ಪಡೀಲ್ ಜಂಕ್ಷನ್ ನಲ್ಲಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಯುವಕನೋರ್ವನು ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ವಿಜಯ್ ಪುಣ್ಕೆದಡಿ (22) ಮೃತಪಟ್ಟ ಯುವಕ. ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ವಿಜಯ್ ಎಂದಿನಂತೆ ಕೆಲಸ ಮಾಡುತ್ತಿದ್ದರು. ನಾಲ್ಕನೇ ಮಹಡಿಯ ಹೊರಭಾಗದಲ್ಲಿ ಸ್ಟೆಪ್ ಹೋಲ್ಡ್ ಬಳಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ 60 ಅಡಿ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಕೆಳಗಿದ್ದ ಕಾಂಕ್ರಿಟ್ ನ ನೀರಿನ ಟ್ಯಾಂಕ್ ಗೆ ಅವರ ತಲೆ ಬಡಿದಿದೆ.
ತಕ್ಷಣ ಅವರನ್ನು ಕಂಕನಾಡಿ ಫಾದರ್ಸ್ ಮುಲ್ಲರ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/03/2022 03:50 pm