ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುವ ಖಾಸಗಿ ಮಿನಿ ಬಸ್‌ವೊಂದು ಬುಧವಾರ ಬೆಳಿಗ್ಗೆ 8:30ಕ್ಕೆ ಹೆಬ್ರಿಯ ಎಸ್‌ಆರ್ ಸ್ಕೂಲ್ ಕಿನ್ನಿಗುಡ್ಡೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಬಸ್‌ನ ಸ್ಟೇರಿಂಗ್ ಎಂಡ್ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 3-4 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಕೂಡಲೇ ಹೆಬ್ರಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/03/2022 10:48 am