ಸುರತ್ಕಲ್ : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್ ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ ಹುಚ್ಚುನಾಯಿಗಳ ಕಾಟ ಅತಿಕಕ್ಕೆ ಹೋಗಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕೆಲದಿನಗಳ ಹಿಂದೆ ಮಲ್ಲಮಾರ್ ನಿವಾಸಿ ಸಂತೋಷ್ ಎಂಬವರ ಮನೆಯ ಒಳಗೆ ಪ್ರವೇಶಿಸಿದ ಹುಚ್ಚು ನಾಯಿಯೊಂದು ಸಂತೋಷ್ ಹಾಗೂ ಅವರ ಮಗಳ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು. ಸಂತೋಷ್ ಅವರ ಕಾಲಿಗೆ ಗಂಭೀರ ಗಾಯಗಳಾಗಿತ್ತು. ಮತ್ತು ಅವರ ಮಗಳ ಕೈ ಮತ್ತು ಕಾಲಿಗೆ ಕಚ್ಚಿ ಹುಚ್ಚು ನಾಯಿ ನಾಪತ್ತೆಯಾಗಿತ್ತು. ಬಳಿಕ ನೆರೆಹೊರೆಯವರು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.
ಸ್ಥಳೀಯ ಕಾರ್ಪೊರೇಟರ್ ಶ್ವೇತ ಮಾತನಾಡಿ, ಹುಚ್ಚು ನಾಯಿಯನ್ನು ಕೊಲ್ಲಲಾಗಿದೆ. ಹುಚ್ಚು ನಾಯಿಯ ಕಡಿತಕ್ಕೊಳಗಾದ ಸಂತೋಷ್ ಮತ್ತು ಅವರ ಮಗಳ ವೈದ್ಯಕೀಯ ಖರ್ಚುಗಳನ್ನು ಮಹಾನಗರ ಪಾಲಿಕೆ ಭರಿಸಲಿದೆ. ಸಂತ್ರಸ್ತರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಎಂದು ಭರವಸೆ ನೀಡಿದ್ದಾರೆ.
Kshetra Samachara
31/03/2022 12:52 pm