ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ ಮಣೂರು ಬಳಿ ಭೀಕರ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ!

ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತ ನಡೆದಿದ್ದು ಅಪಘಾತದಲ್ಲಿ ಓರ್ವ ಮೃತಪಟ್ಟುಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಅದೇ ದಾರಿಯಾಗಿ ಕೋಟದಿಂದ ಕುಂಬಾಸಿ ಕಡೆಗೆ ಹೋಗುತ್ತಿದ್ದ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು. ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಕೆಟ್ಟು ನಿಂತ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದಾರೆ.ಈ ವೇಳೆ ಓರ್ವ ಸವಾರ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಮೃತ ಸವಾರ ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ.ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

05/04/2022 06:15 pm

Cinque Terre

12.89 K

Cinque Terre

0

ಸಂಬಂಧಿತ ಸುದ್ದಿ