ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಇಂದು ಸಂಭವಿಸಿದೆ.ಇವರು ಕೇರಳದ ಕೊಟ್ಟಾಯಂನ ವಿದ್ಯಾರ್ಥಿಗಳು.
ಕೊಟ್ಟಾಯಂನ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 42 ಮಂದಿಯಿದ್ದ ತಂಡ ಮಲ್ಪೆಗೆ ಪ್ರವಾಸಕ್ಕೆಂದು ಬಂದಿತ್ತು. ವಿದ್ಯಾರ್ಥಿಗಳ ಜೊತೆ ಇಬ್ಬರು ಉಪನ್ಯಾಸಕರೂ ಇದ್ದರು. ನೀರನಲ್ಲಿ ಆಡುವಾಗ ಆಕಸ್ಮಿಕವಾಗಿ ಸಮುದ್ರ ದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ಇದೀಗ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದ್ದು ಮುಳುಗಡೆಯಾದ ಮತ್ತೋರ್ವ ವಿದ್ಯಾರ್ಥಿಗಾಗಿ ಶೋಧ ನಡೆದಿದೆ.ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ಶೆಣೈ ಮುಳುಗಡೆಯಾದವರು. ಅಂಟೋನಿ ಶೆಣೈ ಎಂಬಾತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
PublicNext
07/04/2022 03:14 pm