ಮಂಗಳೂರು: ಮಂಗಳೂರಿನ ಹಂಪನಕಟ್ಟೆಯಲ್ಲಿರೋ ವೆನ್ಲಾಕ್ ಆಸ್ಪತ್ರೆ ಎದುರಲ್ಲಿ ಮಧ್ಯಾಹ್ನ ಸುರತ್ಕಲ್- ಮಂಗಳೂರು ನಡುವೆ ಸಂಚರಿಸುವ 45 ನಂಬರಿನ ಸಿಟಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಅಶೆಲ್ ಎಂಬ ಹೆಸರಿನ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯಲ್ಲಿ ಒಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿರುವುದು ಖಚಿತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
Kshetra Samachara
08/04/2022 03:39 pm