ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಕೆಳ ಬದಿಯ ಆರಾರ್ ಟವರ್ಸ್ ಎದುರಿನ ಹೆದ್ದಾರಿಯಲ್ಲಿ ನಿಲ್ಲಿಸಿದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಇನ್ನು ಕಾರಿನ ಚಾಲಕ ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾನೆ.
ಮಣಿಪಾಲ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಲ್ಕಿ ಸಮೀಪಿಸುತ್ತಿದ್ದಂತೆ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು ಕಾರಿನಲ್ಲಿದ್ದ ಚಾಲಕ ಮಂಗಳೂರು ಫಳ್ನೀರ್ ನಿವಾಸಿ ಸಯಾಫ್ ಎಂದು ತಿಳಿದು ಬಂದಿದೆ. ಇದೇ ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿ ಸಹ ಇದ್ದು ಅವರು ಸಹ ಈ ಅಪಘಾತದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
15/04/2022 11:47 am