ಬಜಪೆ:ಬಸ್ಸುಗಳೆರಡರ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಗಾಯಗೊಂಡ ಘಟನೆ ಮಂಗಳೂರು - ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿಯ ಎಡಪದವು ಹನುಮಾನ್ ಮಂದಿರದ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಕುಪ್ಪೆಪದವಿಗೆ ಸಂಚರಿಸುತ್ತಿದ್ದ ಬಸ್ಸಿನ ಹಿಂಬದಿಗೆ ಮೂಡಬಿದಿರೆಗೆ ಸಾಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಡಿಕ್ಕಿಯಾದ ಪರಿಣಾಮ ಎಕ್ಸ್ ಪ್ರೆಸ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 9 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ತಕ್ಷಣ ಮೂಡಬಿದ್ರಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತ ನಡೆದ ನಂತರ ಎಕ್ಸ್ ಪ್ರೆಸ್ ಬಸ್ ಚಾಲಕ ನಾಪತ್ತೆಯಾಗಿದ್ದು,ಘಟನೆಯಲ್ಲಿ ಎರಡೂ ಬಸ್ಸುಗಳು ಜಖಂಗೊಂಡಿವೆ.ಈ ವೇಳೆ ಮೂಡಬಿದಿರೆ - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ಥ ಗೊಂಡಿತ್ತು. ಘಟನಾ ಸ್ಥಳಕ್ಕೆ ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಸುಕುಮಾರ್ ದೇವಾಡಿಗ ಹಾಗೂ ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದರು. ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿದ್ದರು.
Kshetra Samachara
17/04/2022 09:07 pm