ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾದ ಘಟನೆ ಇಂದು ಸಂಭವಿಸಿದೆ.
ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜಿನ 68 ವಿದ್ಯಾರ್ಥಿಗಳ ತಂಡ ನೀರಿಗಿಳಿದ್ದಿತ್ತು.ಈ ಸಂದರ್ಭ ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಸತೀಶ್( 21) ಮತ್ತು ಸತೀಶ್ (21) ನೀರು ಪಾಲಾದ ಯುವಕರು.ಸದ್ಯ ಓರ್ವನ ಶವವನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ಮೇಲಕ್ಕೆತ್ತಿದ್ದಾರೆ.
ನೀರುಪಾಲದ ಮತ್ತೊಬ್ಬ ಯುವಕನಿಗಾಗಿ ಶೋಧ ಮುಂದುವರೆದಿದೆ.ಅಂದಹಾಗೆ ಎರಡು ವಾರ ಮುನ್ನ ಇಲ್ಲಿ ಕೇರಳದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದರು.
PublicNext
18/04/2022 03:29 pm