ವಿಟ್ಲ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಇಂದು ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಹೋಗಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ.
ಬೆಳಗ್ಗೆ 6 ಗಂಟೆಗೆ ಅಪಘಾತ ನಡೆದಿದ್ದು, ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗಿದೆ. ಹೆದ್ದಾರಿಯುದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು. ಬಳಿಕ ಸಾರ್ವಜನಿಕರು ಸುಗಮ ಸಂಚಾರಕ್ಕೆ ಮಾಡಲು ಕಾರ್ಯಾಚರಣೆ ನಡೆಸಿದರು. ಬೆಳಿಗ್ಗೆ 9.30ರ ವೇಳೆಗೆ ಸುಗಮ ಸಂಚಾರ ಸಾಧ್ಯವಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದರು.
Kshetra Samachara
19/04/2022 01:25 pm