ಉಡುಪಿ: ಉಡುಪಿ-ಮಣಿಪಾಲ ರಸ್ತೆಯಲ್ಲಿ ಮತ್ತೊಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಸುಧಾ ಫರ್ನಿಚರ್ಸ್ ಮತ್ತು ಪಕ್ಕದಲ್ಲಿದ್ದ ಹೋಟೆಲ್‌ಗೆ ಆಕಸ್ಮಿಕ ಬೆಂಕಿ ತಗುಲಿ ಫರ್ನಿಚರ್ ಶಾಪ್ ಮತ್ತು ಹೋಟೆಲ್ ಬೆಂಕಿಗೆ ಆಹುತಿಯಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಉಡುಪಿಯ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೆಅಪಾರ ಪ್ರಮಾಣದಲ್ಲಿ ಫರ್ನಿಚರ್ಸ್ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.ಒಟ್ಟಾರೆ
40 ಲಕ್ಷ ರೂ.ಗೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Kshetra Samachara
21/04/2022 09:24 am