ಪಡುಬಿದ್ರೆ: ಜಿಲ್ಲೆಯ ಗಡಿಭಾಗ ಹೆಜಮಾಡಿಯ ಟೋಲ್ ಗೇಟ್ ಬಳಿ ನಿಲ್ಲಿಸಿದ್ದ ಬುಲೆಟ್ ಟ್ಯಾಂಕರ್ ಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನನ್ನು ಮಲ್ಪೆ ಕೊಡವೂರಿನ ಮಹೇಶ್ ಎಂದು ಗುರುತಿಸಲಾಗಿದೆ. ಆತ ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಎಂದು ತಿಳಿದು ಬಂದಿದೆ.
ಟೋಲ್ ಗೇಟ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರಾದರೂ, ಆಗಲೇ ಸವಾರನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ವಿಧಿಯಾಟವೆಂದರೆ ಮೃತ ಯುವಕ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ.ಮಾತ್ರವಲ್ಲದೇ ಮದುವೆ ಕೂಡಾ ನಿಗದಿಯಾಗಿತ್ತು.
ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ಈ ಸಂಬಂಧ ಪ್ರಕರಣ ದಾಖಲಾಗಿದೆ.
Kshetra Samachara
21/04/2022 04:59 pm