ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಗೆ ಅಳವಡಿಸಿದ ಕಬ್ಬಿಣದ ಬೇಲಿಗೆ ಡಿಕ್ಕಿ ಹೊಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಪಡುಪಣಂಬೂರು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಳಿ ಅಳವಡಿಸಿದ್ದ ಕಬ್ಬಿಣದ ಡಿವೈಡರ್ ಮೇಲೇರಿದೆ.
ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ ಹಾಗೂ ಕಾರಿನಲ್ಲಿದ್ದ ಚಾಲಕ ಪವಾಡಸದೃಶ ಪಾರಾಗಿದ್ದಾನೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
PublicNext
21/04/2022 10:58 pm