ಸುಳ್ಯ : ಗಾಂಧಿನಗರದಲ್ಲಿ ತೆಂಗಿನಕಾಯಿ ಲೋಡಿನ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾನೆ.ನಿನ್ನೆ ಏ.21 ರಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಮಂಜುನಾಥ್ ಎಂಬ ಯುವಕ ಸುಳ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡು ಪತ್ನಿ ಮತ್ತು ಮಗ ಜತೆಗೆ ವಾಸವಾಗಿದ್ದರು. ಇತ್ತೀಚೆಗೆ ಆತನ ಪತ್ನಿ ಮತ್ತು ಮಗುವನ್ನು ಊರಿಗೆ ಕಳಿಸಿದ್ದ ಎನ್ನಲಾಗಿದೆ.
ನಿನ್ನೆ ಮಧ್ಯಾಹ್ನ ಸುಳ್ಯ ಗಾಂಧಿನಗರದಲ್ಲಿ ತೆಂಗಿನಕಾಯಿ ಹೇರಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರದಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡಿದ್ದ ಆತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ.
Kshetra Samachara
22/04/2022 09:18 pm