ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು!

ಮಂಗಳೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ‌ಮೃತಪಟ್ಟ ಘಟನೆ ರಾಷ್ಟ್ರೀಯ ಹೆ‌ದ್ದಾರಿ 66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.

ರೊನಾಲ್ಡ್ (59) ಮೃತಪಟ್ಟ ಸ್ಕೂಟರ್ ಸವಾರ. ಕೆಲಸದ ನಿಮಿತ್ತ ನಗರಕ್ಕೆ ಬಂದಿರುವ ಅವರು ಕೊಣಾಜೆಯಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದರು. ಈ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿರುವ ಲಾರಿಯು ಸ್ಕೂಟರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಲಾರಿ ಮೊದಲಿಗೆ ಕಾರೊಂದಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಇದೇ ದಾರಿಯಾಗಿ ಸಾಗುತ್ತಿದ್ದ ವಿಧಾನ ಪರಿಷತ್ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Manjunath H D
Kshetra Samachara

Kshetra Samachara

25/04/2022 09:48 am

Cinque Terre

18.59 K

Cinque Terre

1