ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಇನ್ನೋವಾ: ಮಾಜಿ ಜಿ.ಪಂ.ಸದಸ್ಯನಿಗೆ ಗಂಭೀರ ಗಾಯ

ಬೈಂದೂರು: ಬೈಂದೂರು ಸಮೀಪದ ನಾವುಂದ ಎಂಬಲ್ಲಿ ಇನ್ನೋವಾ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರವಾರ ಜಿ.ಪಂ ಮಾಜಿ ಸದಸ್ಯ ರತ್ನಾಕರ್ ನಾಯ್ಕ ಅವರಿಗೆ ಗಾಯಗಳಾಗಿವೆ. ಅಪಘಾತಕ್ಕೆ ಅವರ ಕಾಲುಮುರಿತಕ್ಕೊಳಗಾಗಿ, ಕೈಬೆರಳು ತುಂಡಾಗಿದೆ ಎನ್ನಲಾಗಿದೆ.

ಸದ್ಯ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.ಅತಿವೇಗದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Edited By : Nirmala Aralikatti
Kshetra Samachara

Kshetra Samachara

02/05/2022 06:13 pm

Cinque Terre

8.98 K

Cinque Terre

0