ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪ್ರದೇಶವಾದ ಹೆಜಮಾಡಿ ನವಯುಗ ಟೋಲ್ ಪ್ಲಾಜಾ ಸಮೀಪ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ
ಮಂಗಳೂರಿನಿಂದ ಉಡುಪಿಯತ್ತ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ಅದರ ಚಾಲಕನು ಟೀ ಕುಡಿಯಲು ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ಸೀಟ್ ಹಿಂಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಆತ ಸ್ಥಳೀಯ ಗೂಡಂಗಡಿ, ಟೋಲ್ ಸಿಬ್ಬಂದಿಗಳಿಗೆ ತಿಳಿಸಿದ್ದು ಸ್ಥಳಿಯರ ಸಮಯಪ್ರಜ್ಞೆ ಹಾಗೂ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
13/05/2022 07:59 am