ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿ ಕಾಲು ಜಾರಿ ನೀರಿಗೆ ಬಿದ್ದು ಸಾವು

ಹೆಬ್ರಿ : ಹೊಳೆಯಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ವರಂಗ ಗ್ರಾಮದ ಬೈದಡಪು ಎಂಬಲ್ಲಿ ನಡೆದಿದೆ.

ಮೃತರನ್ನು ವರಂಗ ಬೈದಡಪು ನಿವಾಸಿ ಶ್ರೀಧರ ಪೂಜಾರಿ(69) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪದ ಹೊಳೆಯ ದಡದಲ್ಲಿ ನಿಂತು ಬಲೆ ಹಾಕಿ ಮೀನು ಹಿಡಿಯುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದರೆನ್ನಲಾಗಿದೆ.

ಹೊಳೆಯ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಆಗದೇ ಅಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

14/05/2022 12:58 pm

Cinque Terre

7.47 K

Cinque Terre

0