ಮಣಿಪಾಲ : ಬುಧವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಮಣಿಪಾಲ ರಸ್ತೆಯ ಲಕ್ಷ್ಮೀಂದ್ರ ನಗರ ಬಳಿ ಸಂಭವಿಸಿತ್ತು.
ಸದ್ಯ ಅಪಘಾತದ ಸಿಸಿಟಿವಿ ಫೂಟೇಜ್ ಲಭ್ಯವಾಗಿದ್ದು ವಿದ್ಯಾರ್ಥಿ ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆಯುವ ದೃಶ್ಯ ದಾಖಲಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ನೆರವಿಗೆ ಧಾವಿಸುತ್ತಾರಾದರೂ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದ. ಇನ್ನೋರ್ವನಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
PublicNext
26/05/2022 11:36 am