ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಡಿ ಮೇಲಿನಿಂದ ಬಿದ್ದು ವಿದ್ಯಾರ್ಥಿ ಸಾವು

ಬಂಟ್ವಾಳ: ಗೆಳೆಯಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ಕ್ಲಾಸಿನ ವಿದ್ಯಾರ್ಥಿ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ.

ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಸಿಟಪ್ಲಾಜಾ ರೆಸಿಡೆನ್ಸಿ ಯ ಮೂರನೇ ಮಹಡಿಯ ಸೀಟ್ ಹೌಸ್ ನಲ್ಲಿ ಮೇ.26ರಂದು ಸಾಹಿಲ್ ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ ಆಯ ತಪ್ಪಿ ಮೂರನೇ ಮಹಡಿಯ ಮೇಲಿನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟಿದ್ದಾನೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

27/05/2022 03:10 pm

Cinque Terre

10.59 K

Cinque Terre

1

ಸಂಬಂಧಿತ ಸುದ್ದಿ