ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಡಿವೈಡರ್‌ಗೆ ಸ್ಕೂಟರ್ ಡಿಕ್ಕಿ-ಸವಾರರಿಬ್ಬರಿಗೆ ಗಂಭೀರ ಗಾಯ

ಮಂಗಳೂರು: ಅತೀವೇಗದಿಂದ ಚಲಾಯಿಸಿಕೊಂಡು ಬಂದಿರುವ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ.

ಮೇ 29 ರಂದು ನಸುಕಿನ ವೇಳೆ 2.15 ರ ಸುಮಾರಿಗೆ ವೇಗವಾಗಿ ಚಲಾಯಿಸಿಕೊಂಡು ಬಂದ ಸ್ಕೂಟರ್ ಒಂದು ಡಿವೈಡರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನು ಅಲ್ಲಿಂದಲೇ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕರೋರ್ವರು ಗಮನಿಸಿ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಸಂಚಾರ ಪೊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

30/05/2022 10:11 am

Cinque Terre

11.49 K

Cinque Terre

0

ಸಂಬಂಧಿತ ಸುದ್ದಿ