ಮಂಗಳೂರು : ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ರವಿವಾರ ನಡೆದ ಅಪಘಾತದ ಗಾಯಾಳು ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ.
ಸದ್ಯ ಮೃತ ಧೀರಜ್ ಅವರ ಕುಟುಂಬದ ಸಮ್ಮತಿಯ ಮೇರೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯಲಿದೆ. ಚೆನ್ನೈ ತಂಡ ಖಾಸಗಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯ ಮಸೂದ್ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಎದುರುಗಡೆಯ ಉಸ್ಮಾನಿಯಾ ಕಾಂಪ್ಲೆಕ್ಸ್ ಬಳಿ ರವಿವಾರ ಬೆಳಗ್ಗಿನ ಜಾವ ನಡೆದಿತ್ತು.
ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇಬ್ಬರಲ್ಲಿ ಒಬ್ಬ ಗಣೇಶ್ ಎಂಬುವವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗಣೇಶ್ ಶನಿವಾರ ರಾತ್ರಿ ತನ್ನ ಸ್ನೇಹಿತ ಧೀರಜ್ ರನ್ನು ಅವರ ಮನೆಗೆ ಬಿಟ್ಟು ಬರಲೆಂದು ತನ್ನ ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Kshetra Samachara
31/05/2022 05:31 pm