ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಬುಧವಾರ ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ರಸ್ತೆಯ ಪಕ್ಕಕ್ಕೆ ಇಳಿದಿದೆ.ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
01/06/2022 05:24 pm