ಬಂಟ್ವಾಳ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.ಇನ್ನು ಗಿರೀಶ್ ಮಾರ್ನಬೈಲು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿ.
ಗಿರೀಶ್ ಅವರು ಪ್ಲಂಬರ್ ಕೆಲಸಗಾರನಾಗಿದ್ದು, ಇಂದು ಬೆಳಿಗೆ ತನ್ನ ದ್ವಿಚಕ್ರದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಬೈಕ್ ಸವಾರನ ಎರಡು ಕಾಲು ಹಾಗೂ ಕೈಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು ಸದ್ಯ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Kshetra Samachara
08/06/2022 04:25 pm