ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವು

ಬಂಟ್ವಾಳ: ಸಿದ್ಧಕಟ್ಟೆ ಸಮೀಪ ಸೊರ್ನಾಡು ಎಂಬಲ್ಲಿ ಮಂಗಳವಾರ ನಡೆದ ಘಟನೆಯಲ್ಲಿ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲೊರೆಟ್ಟೊಪದವು ನಿವಾಸಿ ನಿತೇಶ್ (30) ಹಾಗೂ ಮಯ್ಯರಬೈಲು ನಿವಾಸಿ ಶಶಿಧರ್ (26) ಮೃತಪಟ್ಟವರು. ಬೈಕ್ ಸವಾರರಾದ ಇವರಿಬ್ಬರೂ ಸಿದ್ದಕಟ್ಟೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದರು. ಈ ಸಂದರ್ಭ ಬಿ.ಸಿ.ರೋಡಿನಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಲ್ಲಿಸದೆ ಪರಾರಿಯಾಗಲು ಲಾರಿ ಚಾಲಕ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಲಾರಿಯನ್ನು ಬೆನ್ನಟ್ಟಿದ್ದು ಕುದ್ಕೋಳಿ ಎಂಬಲ್ಲಿ ತಡೆದು ನಿಲ್ಲಿಸಿದರು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ. ಮೂರ್ತಿ ಸಹಿತ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದರು.

Edited By : Vijay Kumar
Kshetra Samachara

Kshetra Samachara

14/06/2022 07:37 pm

Cinque Terre

7.99 K

Cinque Terre

0

ಸಂಬಂಧಿತ ಸುದ್ದಿ