ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ರಾಸಾಯನಿಕ ತುಂಬಿದ್ದ ಟ್ಯಾಂಕರಿಗೆ ಬೆಂಕಿ: ಟೋಲ್ ಗೇಟ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಬಳಿ ಹೈಡ್ರೋಕ್ಲೋರಿಕ್ ಆಮ್ಲ ತುಂಬಿದ್ದ ಟ್ಯಾಂಕರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಟ್ಯಾಂಕರ್ ಹಿಂಬದಿ ರೌಂಡ್ಸ್ ನಲ್ಲಿದ್ದ ಟೋಲ್ ಗೇಟ್ ಸಿಬ್ಬಂದಿಯವರ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ದುರಂತವೊಂದು ತಪ್ಪಿದೆ.

ಮಹಾರಾಷ್ಟ್ರದಿಂದ ಮಂಗಳೂರು ಕಡೆಗೆ ಹೈಡ್ರೋಕ್ಲೋರಿಕ್ ಆಮ್ಲ ತುಂಬಿ ಸಾಗುತ್ತಿದ್ದ ಟ್ಯಾಂಕರ್ ಟಯರ್ ಬ್ಲಾಸ್ಟ್ ಆಗಿ ಆಕಸ್ಮಿಕ ಬೆಂಕಿ ಸಂಭವಿಸಿದೆ. ಲಾರಿಯ ಹಿಂದಿನಿಂದ ಬರುತ್ತಿದ್ದ ಟೋಲ್ಗೇಟ್ ರೌಂಡ್ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳೀಯರು ಕೂಡ ಇದಕ್ಕೆ ಸಾಥ್ ನೀಡಿದ್ದಾರೆ. ಹೆದ್ದಾರಿ ಸುರಕ್ಷಾ ಅಧಿಕಾರಿ ಶೈಲೇಶ್ ಶೆಟ್ಟಿ, ಮನೋಹರ್ ಹೆಜಮಾಡಿ ಸಹಿತ ಟೋಲ್ಗೇಟ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Edited By :
Kshetra Samachara

Kshetra Samachara

16/06/2022 02:16 pm

Cinque Terre

7.95 K

Cinque Terre

0

ಸಂಬಂಧಿತ ಸುದ್ದಿ