ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ ಮಳೆ ಅವಾಂತರ: ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯ

ಮಂಗಳೂರು: ಮಂಗಳೂರು ನಗರದಲ್ಲಿ ಇಂದು ಸಂಜೆಯಿಂದ ಭಾರೀ ಮಳೆಯಾಗುತ್ತಿದೆ. ನಗರದ ಕುಂಟಿಕಾನ ಬಳಿ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಟ್ಯಾಂಕರ್‌ನ ಹಿಂದೆ ಡಿಕ್ಕಿ ಹೊಡೆದ ಸ್ಕೂಟರ್ ನಜ್ಜುಗುಜ್ಜಾಗಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

20/06/2022 10:30 pm

Cinque Terre

16.59 K

Cinque Terre

1

ಸಂಬಂಧಿತ ಸುದ್ದಿ