ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ ಅಡ್ಕಾರು ಬಳಿ ತೋಟಕ್ಕೆ ನುಗ್ಗಿದ ಕೇರಳ ಆರ್.ಟಿ.ಸಿ.ಬಸ್: ಒಬ್ಬರಿಗೆ ಗಾಯ!

ಸುಳ್ಯ: ಕಾಸರಗೋಡಿನಿಂದ‌ ಸುಳ್ಯಕ್ಕೆ ಬರುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆಯ ಬಸ್ಸೊಂದು ಅಪಘಾತಕ್ಕೀಡಾದ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ತೋಟಕ್ಕೆ ನುಗ್ಗಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಗಾಯಾಳು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸ್‌‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಅಪಘಾತವಾಗುವ ಸಂದರ್ಭದಲ್ಲಿ ಕೆಲವೇ ಕೆಲವು ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

Edited By : Manjunath H D
PublicNext

PublicNext

21/06/2022 06:49 pm

Cinque Terre

44.2 K

Cinque Terre

0