ಕಾಪು : ರಾಷ್ಟ್ರೀಯ ಹೆದ್ದಾರಿ 66 ಕಾಪು ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಡಿವೈಡರ್ ಮೇಲೆ ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಚಾಲಕ ಲಾರಿಯನ್ನು ಒಮ್ಮೆಲೇ ಎಡಕ್ಕೆ ತಿರುಗಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
22/06/2022 07:54 pm