ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ರಾಜು ಗಾಣಿಗ (42) ಸಾವನ್ನಪ್ಪಿದವರು. ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಡಿಕ್ಕಿ ಹೊಡೆದ ಬಳಿಕ ಘಟನಾ ಸ್ಥಳದಿಂದ ಕಾರು ಚಾಲಕ ಪರಾರಿಯಾಗಿದ್ದಾನೆ. ಗುಜರಾತ್ ನೋಂದಣಿಯ ಕಾರು ಇದಾಗಿದ್ದು ಬಳಿಕ ಕುಂದಾಪುರ, ಬೈಂದೂರು ಪೋಲಿಸರು ಕಾರ್ಯಾಚರಣೆ ನಡೆಸಿ ಹಂಗಳೂರು ಬಳಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ರಾಜು ಗಾಣಿಗ, ಬೈಂದೂರು ಪರಿಸರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.
Kshetra Samachara
24/06/2022 08:33 pm