ಬ್ರಹ್ಮಾವರ: ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆಯ ಸಮೀಪ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
25/06/2022 12:52 pm