ಕಾಪು: ಉದ್ಯಾವರ ಬಸ್ ನಿಲ್ದಾಣದಲ್ಲಿ ಬ್ಯಾಂಕ್‌ನ ಮಹಿಳಾ ಸಿಬ್ಬಂದಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಉದ್ಯಾವರ ಗುಡ್ಡೆಯಂಗಡಿ ನಿವಾಸಿ ವಸಂತಿ (55) ಮೃತ ಮಹಿಳೆ. ಕಟ್ಟಿಂಗೇರಿ ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗ ಮಾಡಿಕೊಂಡಿರುವ ವಸಂತಿ ಅವರು ಗುರುವಾರ ಬೆಳಗ್ಗೆ 8.30ಕ್ಕೆ ಬ್ಯಾಂಕ್‌ಗೆ ಹೋಗಲು ಉದ್ಯಾವರದ ಗುಡ್ಡೆಯಂಗಡಿ, ಬಸ್ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಿದ್ದಾಗ ಕುಸಿದು ಬಿದ್ದಿದ್ದರು. ಸ್ಥಳೀಯರು ಅವರನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.
ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಮೃತರ ಪುತ್ರ ಹೇಮಂತ್ ಕುಮಾರ್ ಕಾಪು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Kshetra Samachara
01/07/2022 02:47 pm