ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ನಡೆದಿದೆ.
ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಬ್ಯಾಟರಿ ಬಳಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.
ಚಾಲಕ ಸರಿಯಾದ ಸಮಯಕ್ಕೆ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದ ಹಿನ್ನೆಲೆ ನಡೆಯ ಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
Kshetra Samachara
06/07/2022 04:00 pm