ಬೈಂದೂರು: ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಶಿರೂರಿನಲ್ಲಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.
ಚಾಲಕನ ಅತಿವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದೆ. ಶಿರೂರಿನ ಶ್ರೀ ವೆಂಕಟರಮಣ ದೇವಸ್ಥಾನ ಬಳಿ ಧಾರಾಕಾರ ಮಳೆ ಸುರಿಯುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಮೂಲತಃ ಉಡುಪಿಯವರಾಗಿದ್ದು, ಬೆಳಗಾಂನಿಂದ ಉಡುಪಿಗೆ ಪ್ರಯಾಣಿಸುತಿದ್ದರು ಎನ್ನಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಬೈಂದೂರು ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
Kshetra Samachara
06/07/2022 05:46 pm