ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಹೆದ್ದಾರಿಯಲ್ಲಿ ಟ್ಯಾಂಕರ್ ನಿಂದ ದ್ರವ ಸೋರಿಕೆ: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು

ಕಾಪು‌ : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ನಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಸುತ್ತಲೂ ಹೊಗೆ ಆವರಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕಾಪು‌ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Edited By : Nagesh Gaonkar
Kshetra Samachara

Kshetra Samachara

08/07/2022 11:47 am

Cinque Terre

11.07 K

Cinque Terre

0

ಸಂಬಂಧಿತ ಸುದ್ದಿ