ಕಾರ್ಕಳ: ತಾಲೂಕಿನ ಬೆಳ್ಮಣ್ ಸಮೀಪ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಮಾವಿನಕಟ್ಟೆ ಬಳಿ ಇಂದು ಈ ದುರ್ಘಟನೆ ಸಂಭವಿಸಿದೆ.ಘಟನೆಯಲ್ಲಿ ಅಣ್ಣ ತಮ್ಮಂದಿರಾದ ಸಂದೀಪ್ ಮತ್ತು ಸತೀಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಂದೀಪ್ ಮತ್ತು ಸತೀಶ್ ನಿಟ್ಟೆಯಿಂದ ನಂದಳಿಕೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದಾಗ, ಪಡುಬಿದ್ರೆಯಿಂದ ವೇಗವಾಗಿ ಬರುತಿದ್ದ ಇನ್ನೋವಾ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಓರ್ವ ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.
Kshetra Samachara
10/07/2022 05:30 pm