ಮಂಗಳೂರು: ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸಂಚಾರಿಸುತ್ತಿದ್ದ ಕಾರೊಂದು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು- ದಕ್ಷಿಣ ಕನ್ನಡ ಗಡಿಭಾಗ ಜೇನುಕಲ್ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಸುಟ್ಟು ಭಸ್ಮವಾಗಿದೆ.
ಕಾರಿನಲ್ಲಿದ್ದ ಮಂಗಳೂರು ಮೂಲದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ನಿಸಾನ್ ಕಂಪನಿ ಸೇರಿದ ಕಾರಿನ ಇಂಜಿನ್‌ನಲ್ಲಿ ಹೊಗೆ ನೋಡಿದ ಕುಟುಂಬದವರು ಕಾರು ನಿಲ್ಲಿಸಿ ತಕ್ಷಣ ಹೊರಬಂದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಬಟ್ಟೆ, ಮೊಬೈಲ್, ಹಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
12/07/2022 01:54 pm