ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ
ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಸಚಿವರ ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳು ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದೆ.ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ ಅಪಘಾತ ಸಂಭವಿಸಿದೆ.ಘಟನೆಯಿಂದ ಅದೃಷ್ಟವಶಾತ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
PublicNext
12/07/2022 05:07 pm