ಉಡುಪಿ: ಆಟವಾಡಲೆಂದು ತೆರಳಿದ್ದ 5 ವರ್ಷದ ಮಗು ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ತೆಂಕಬೆಟ್ಟು ಎಂಬಲ್ಲಿ ಸಂಭವಿಸಿದೆ.
ಲಾರೆನ್ ಲೂವಿಸ್ ಮೃತ ಬಾಲಕ. ಈತ ಉಪ್ಪೂರು ನಿವಾಸಿ ನೋರ್ಮನ್ ಮತ್ತು ಸಿಲ್ವಿಯ ಎಂಬವರ ಪುತ್ರನಾಗಿದ್ದಾನೆ.
ಇವರು ಕುವೈಟ್ ನಲ್ಲಿ ವಾಸವಾಗಿದ್ದು ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು.
ಮಗು ,ಮನೆಯ ಪಕ್ಕ ಆಟವಾಡುತ್ತಿದ್ದಾಗ ಅಕಸ್ಮಾತ್ತಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದೆ.ಬ್ರಹ್ಮಾವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.
PublicNext
14/07/2022 10:31 am