ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಹದಗೆಟ್ಟ ರಸ್ತೆ ಅವಾಂತರ; ಹೊಂಡಕ್ಕೆ ಇಳಿದು, ಡಿವೈಡರ್ ಮೇಲೇರಿದ ಬಸ್!

ಕುಂದಾಪುರ: ಮಳೆಗಾಲದಲ್ಲಿ ಹದಗೆಟ್ಟ ಮತ್ತು ಗುಂಡಿಗಳಿಂದ ತುಂಬಿದ ರಸ್ತೆಗಳು ಏನೇನು ಅನಾಹುತಗಳಿಗೆ ಕಾರಣವಾಗುತ್ತವೆ ಎಂಬುದಕ್ಕೆ ಇಲ್ಲಿದೆ ತಾಜಾ ಉದಾಹರಣೆ. ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಎರಡು ಅಡಿ ಹೊಂಡಕ್ಕೆ ಇಳಿದ ಬಸ್ ವೊಂದು, ಚಾಲಕನ ನಿಯಂತ್ರಣ ಕಳೆದುಕೊಂಡು 300 ಮೀಟರ್ ದೂರದ ಡಿವೈಡರ್ ಮೇಲೆ ಚಲಿಸಿದ ಘಟನೆ ಇಂದು ಸಂಭವಿಸಿದೆ!

ಕುಂದಾಪುರ ತಾಲೂಕಿನ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಇಂದು ಈ ಘಟನೆ ನಡೆದಿದೆ. ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ನ ಟಯರ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಹೆದ್ದಾರಿ ಹೊಂಡಕ್ಕೆ ಇಳಿದಿದೆ.

ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರು 300 ಮೀಟರ್ ದೂರದ ಡಿವೈಡರ್ ಏರಿ ಸಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಹೀಗೆ ಅಪಾಯದಲ್ಲಿ ಸಾಗಿದ ಬಸ್, ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

Edited By : Shivu K
Kshetra Samachara

Kshetra Samachara

16/07/2022 04:38 pm

Cinque Terre

15.74 K

Cinque Terre

5