ಬೈಂದೂರು: ಬೈಂದೂರು ತಾಲೂಕು ವ್ಯಾಪ್ತಿಯ ಶಿರೂರಿನಲ್ಲಿ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್, ಟೋಲ್ ಗೇಟ್ ಕಂಬಕ್ಕೆ ಡಿಕ್ಕಿಯಾದ ಪ್ರಕರಣದಲ್ಲಿ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹಾಗೂ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟವರಲ್ಲಿ ಒಬ್ಬರು ಮಹಿಳೆ, ಇಬ್ಬರು ಪುರುಷರು ಸೇರಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ಇದ್ದ ರೋಗಿ ಹಾಗೂ ರೋಗಿಯ ಪತ್ನಿ ಮತ್ತು ಸಂಬಂಧಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಈ ದುರಂತ ಇಂದು ಸಂಭವಿಸಿತ್ತು. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಅಂಬುಲೆನ್ಸ್, ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಬಡಿದು ಪಲ್ಟಿಯಾಗಿತ್ತು. ಗಂಭೀರ ಗಾಯಗೊಂಡವರನ್ನು ಕುಂದಾಪುರದ ಆಸ್ಪತ್ರೆಗೆ ಸೇರಿಸಲಾಗಿತ್ತು.
PublicNext
20/07/2022 06:51 pm