ಬೈಂದೂರು: ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ವಿದ್ಯುತ್ ಕಂಬ ಬಿದ್ದ ಕಾರಣ ಚಾಲಕ ಗಂಭೀರ ಗಾಯಗೊಂಡ ಘಟನೆ ಬೈಂದೂರು ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ 766ಸಿ ಕಳವಾಡಿ ಎಂಬಲ್ಲಿ ಸಂಭವಿಸಿದೆ.
ಶಿರೂರು ಮೈದಿನಪುರದ ಹೊಸಮನೆ ನಿವಾಸಿ ಸದಾಶಿವ (45) ಗಾಯಗೊಂಡ ಚಾಲಕರಾಗಿದ್ದಾರೆ. ಸದಾಶಿವ ಅದೇ ರಸ್ತೆಯಲ್ಲಿ ಸಾಗುತ್ತಿದ್ದಾಗ ಅಕಸ್ಮಿಕವಾಗಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರ ತುಂಡಾಗಿ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಪರಿಣಾಮವಾಗಿ ರಿಕ್ಷಾದ ಮೇಲೆ ವಿದ್ಯುತ್ ಕಂಬ ವಾಲಿದೆ. ಇದರಿಂದ ರಿಕ್ಷಾ ಚಲಾಯಿಸುತ್ತಿದ್ದ ಚಾಲಕ ಗಂಭೀರ ಗಾಯಗೊಂಡಿದ್ದಲ್ಲದೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಆಗಮಿಸಿದ ಬೈಂದೂರು ಮೆಸ್ಕಾಂ ನವರು ತೆರವು ಕಾರ್ಯ ಮಾಡಿದ್ದಾರೆ.
PublicNext
21/07/2022 10:38 am