ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಎದುರುಗಡೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮೃತ ಬೈಕ್ ಸವಾರನನ್ನು ಉಡುಪಿ ನಿವಾಸಿ ಗುರುತಿಸಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಸುರತ್ಕಲ್ ಗೋವಿಂದಾಸ್ ಕಾಲೇಜ್ ಹೆದ್ದಾರಿ ಜಂಕ್ಷನ್ ಬಳಿ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ಬೈಕ್ ಸವಾರ ಎಸೆಯಲ್ಪಟ್ಟು ಲಾರಿ ಚಕ್ರದ ಅಡಿಗೆ ಸಿಲುಕಿಕೊಂಡು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
21/07/2022 08:21 pm