ಮಂಗಳೂರು: ಲಾರಿಯೊಂದು ಢಿಕ್ಕಿ ಹೊಡೆದು ಬೈಕ್ ಸವಾರನ ಮೇಲೆಯೇ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನ ಮುಂಭಾಗ ನಡೆದಿದೆ. ಕಟಪಾಡಿಯ ಮಟ್ಟು ನಿವಾಸಿ ಅಕ್ಷಯ್(33) ಮೃತಪಟ್ಟ ಯುವಕ.
ಅಕ್ಷಯ್ ಮಂಗಳೂರಿನಿಂದ ಎನ್ಎಚ್ 66ರ ಮೂಲಕ ಕಟಪಾಡಿಯ ಮಟ್ಟುವಿನಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗ ಲಾರಿಯೊಂದು ಢಿಕ್ಕಿ ಹೊಡೆದು ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಈ ವೇಳೆ ಅವರ ಮೇಲೆಯೇ ಬೈಕ್ ಹರಿದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
22/07/2022 07:14 am